ಸಹಕಾರ ‘ಡಿಪ್ಲೊಮಾ ಕೋರ್ಸ್’ ಪ್ರವೇಶಕ್ಕಾಗಿ ಅವಧಿ ವಿಸ್ತರಣೆ

ಸಹಕಾರ ‘ಡಿಪ್ಲೊಮಾ ಕೋರ್ಸ್’ ಪ್ರವೇಶಕ್ಕಾಗಿ ಅವಧಿ ವಿಸ್ತರಣೆ

ಮೂಡುಬಿದಿರೆ: 2025 ಜನವರಿಯಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನಾಂಕವನ್ನು ಜ.15 ರವರೆಗೆ ವಿಸ್ತರಿಸಲಾಗಿದೆ ಎಂದು ಕನಾ೯ಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಅಪರೇಟೀವ್ ಮ್ಯಾನೇಜ್ ಮೆಂಟ್ ಮೂಡುಬಿದಿರೆ ಲಾಡಿ ಇದರ ಪ್ರಾಂಶುಪಾಲ ಡಾ. ಎಂ. ವಿಶ್ವೇಶ್ವರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ 600 ರೂ. ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ 500 ರೂ. ಶಿಷ್ಯ ವೇತನ ನೀಡಲಾಗುವುದು.

ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಮತ್ತು ಇತರೆ ಎಲ್ಲಾ ರೀತಿಯ ಸಹಕಾರ ಸಂಘ/ಸಂಸ್ಥೆಗಳು ಮತ್ತು ಬ್ಯಾಂಕ್‌ಗಳ ಉದ್ಯೋಗ ಅವಕಾಶಗಳಲ್ಲಿನ ನೇಮಕಾತಿಗೆ ಸಹಕಾರ ಕಾಯಿದೆ ಮತ್ತು ನಿಯಮಗಳಿಗೆ ಅನುಸಾರವಾಗಿ ಆದ್ಯತೆ ಕಲ್ಪಿಸಲಾಗಿದೆ.

ಅಲ್ಲದೆ ಈ ಪಠ್ಯಕ್ರಮವು ಕೆ.ಎ.ಎಸ್. ಪರೀಕ್ಷೆಯ ‘ಸಹಕಾರ ಮತ್ತು ಗ್ರಾಮೀಣ ಅಭಿವೃದ್ಧಿ’ ವಿಷಯ ಮತ್ತು ಸಹಕಾರ ಇಲಾಖೆಯ ಕೋ-ಆಪರೇಟಿವ್ ಇನ್‌ಸ್ಪೆಕ್ಟರ್ ಹುದ್ದೆ ಹಾಗೂ ಎಲ್ಲಾ ಸಹಕಾರ ಸಂಘ/ಸಂಸ್ಥೆಗಳ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾಗಿದೆ. ಸಹಕಾರ ಸಂಘ/ಸಂಸ್ಥೆಗಳಲ್ಲಿನ ಖಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದೂರ ಶಿಕ್ಷಣ ಕೊಸ್೯ಗೆ ಪ್ರವೇಶ ನೀಡಲಾಗುವುದು ಹೆಚ್ಚಿನ ಮಾಹಿತಿಗೆ 08258-236561, 9449075746, 8971361396 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article