
ನಿವೃತ್ತ ಉಪ ವಲಯಾರಣ್ಯಾಧಿಕಾರಿ ಅಯ್ಯಪ್ಪ ನಿಧನ
Thursday, January 2, 2025
ಮೂಡುಬಿದಿರೆ: ನಿವೃತ್ತ ಉಪವಲಯ ಅರಣ್ಯಾಧಿಕಾರಿ, ಬಜಗೋಳಿ ನಿವಾಸಿ ಅಯ್ಯಪ್ಪ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಕೆ.ಎಂ.ಸಿ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಕಾರ್ಕಳ, ಮೂಡುಬಿದಿರೆ, ಶಿರ್ತಾಡಿಯಲ್ಲಿ ಅರಣ್ಯಾಧಿಕಾರಿಯಾಗಿ ಸುಮಾರು ಮೂವತ್ತು ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.