ಮೂಡಬಿದ್ರಿಯಲ್ಲಿ ಕೃತಕ ಆಭರಣ ತಯಾರಿ ತರಬೇತಿ ಉದ್ಘಾಟನೆ

ಮೂಡಬಿದ್ರಿಯಲ್ಲಿ ಕೃತಕ ಆಭರಣ ತಯಾರಿ ತರಬೇತಿ ಉದ್ಘಾಟನೆ


ಮೂಡುಬಿದಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಶಾಖೆ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವುಗಳ ಜಂಟಿ ಆಶ್ರಯದಲ್ಲಿ 15 ದಿನಗಳ ಕೃತಕ ಆಭರಣ ತಯಾರಿ ತರಬೇತಿಯನ್ನು ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದಲ್ಲಿ ಉದ್ಘಾಟಿಸಲಾಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಶುಭ ಹಾರೈಸಿದರು.

ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಇದರ ಶಾಖಾ ವ್ಯವಸ್ಥಾಪಕ ಸುರೇಶ್ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತನಾಡಿ, ಸ್ವ-ಉದ್ಯೋಗದ ನಿಯಮಗಳು, ಸ್ವ-ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಗಳು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡಾದ ಸಹಾಯಕ ನಿರ್ವಾಹಕ ಪ್ರೇಮ್ ಕುಮಾರ್, ತರಬೇತಿ ಕೇಂದ್ರದ ನಿರ್ದೇಶಕಿ ಸಂಪನ್ಮೂಲ ವ್ಯಕ್ತಿ ಶುಭ ಲಕ್ಷ್ಮೀ ಉಪಸ್ಥಿತರಿದ್ದರು.

ಇಪ್ಪತೈದು ಜನ ಮಹಿಳೆಯರು ತರಬೇತಿಯನ್ನು ಪಡೆಯುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article