
ಮೂಡುಬಿದಿರೆ: ‘ಕೋಟಿ-ಚೆನ್ನಯ’ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ
Wednesday, January 8, 2025
ಮೂಡುಬಿದಿರೆ: ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ.25 ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಡುಗಡೆ ಗೊಳಿಸಿದರು.
ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಗುಣಪಾಲ ಕಡಂಬ, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಪುರಸಭೆ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಆರ್. ಪಂಡಿತ್, ಪ್ರಮುಖರಾದ ಶಾಂತಿ ಪ್ರಸಾದ್ ಹೆಗ್ಡೆ, ಭರತ್ ಶೆಟ್ಟಿ ಬೆಳುವಾಯಿ, ನಾಗವರ್ಮ ಜೈನ್, ನಾಗರಾಜ್ ಪೂಜಾರಿ, ಶಶಿಧರ್ ನಾಯಕ್ ಮಿತ್ತಬೈಲು, ಶಶಿಧರ್ ಅಂಚನ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.