ಕಂಬಳಕ್ಕೆ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕಂಬಳಕ್ಕೆ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ


ಮೂಡುಬಿದಿರೆ: ಜಾನಪದ ಕ್ರೀಡೆಯಾಗಿರುವ ತುಳುನಾಡಿನ ಕಂಬಳವು ಧಾಮಿ೯ಕ ಮತ್ತು ಸಾಂಸ್ಕೃತಿಕದ ಕೊಂಡಿಯಾಗಿದೆ. ಇಂತಹ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮ ಕತ೯ವ್ಯ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದಭ೯ದಲ್ಲಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡುತ್ತಿದ್ದರು. ಇದೀಗ ರಾಜ್ಯ ಸರಕಾರ ನಿಲ್ಲಿಸಿರುವ ಕಂಬಳ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಅವರು ಮೂಡುಬಿದಿರೆಯ ಒಂಟಿಕಟ್ಟೆ ಕಡಲಕೆರೆಯಲ್ಲಿ ನಡೆದ 22ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಶನಿವಾರ ಸಂಜೆ ಸಭಾ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 


ಶಾಸಕ ಕೋಟ್ಯಾನ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜಾತ್ರೆಯ ರೀತಿಯಲ್ಲಿ ಈ ಕಂಬಳವು ನಡೆಯುತ್ತಿದ್ದು, ಯುವಜನತೆ ಇದನ್ನು ಉಳಿಸುವಂತಹ ಕೆಲಸವನ್ನು ಮಾಡಬೇಕಾಗಿದೆ ಎಂದರು.

ಸಂಸದ ಕ್ಯಾ. ಬೃಜೇಶ್ ಚೌಟ, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಲ್ಲಡ್ಕ ಪ್ರಭಾಕರ ಭಟ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ಹರಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿಯ ಪ್ರಮುಖರಾದ ಗುಣಪಾಲ ಕಡಂಬ, ಭಾಸ್ಕರ ಕೋಟ್ಯಾನ್, ರಂಜಿತ್ ಪೂಜಾರಿ ಮತ್ತಿತರರಿದ್ದರು.


ವಿಜಯೇಂದ್ರ ಅವರು ನಂತರ ಕಂಬಳ ಕರೆಯನ್ನು ವೀಕ್ಷಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article