
ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ : ಕೆ. ಶ್ರೀಪತಿ ಭಟ್
ಮೂಡುಬಿದಿರೆ: ಸೇವಾಂಜಲಿ ಎಜುಕೇಷನಲ್ ಟ್ರಸ್ಟ್ (ರಿ) ಮೂಡುಬಿದಿರೆ ವಿದ್ಯಾ ಭಾರತಿ ಸಂಯೋಜಿತ ಪ್ರೇರಣಾ ಅನುದಾನಿತ ಹಿ.ಪ್ರಾ ಶಾಲೆ ಪ್ರೇರಣಾ ಶಿಶು ಮಂದಿರ ಕಡಲಕೆರೆ ಇದರ ವಾರ್ಷಿಕೋತ್ಸವ 'ಪ್ರೇರಣಾ ವೈಭವ'ವು ಶನಿವಾರ ನಡೆಯಿತು.
ಉದ್ಯಮಿ ಶ್ರೀಪತಿ ಭಟ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಿದೆ.
ಪ್ರೇರಣಾ ಶಾಲೆ ಆರಂಭಿಸುವಾಗ ೫೩ ವಿದ್ಯಾರ್ಥಿಗಳಿದ್ದು ಇದೀಗ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಯಾಗಿರುವುದು ಸಾಕ್ಷಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಪ್ರೇರಣಾ ಶಾಲೆಯ ಸಂಚಾಲಕ ಶಾಂತರಾಮ್ ಕುಡ್ವ ಅಧ್ಯಕ್ಷತೆ ವಹಿಸಿದ್ದರು.
ಸನ್ಮಾನ: ಪುರಸಭಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಲಾ ಹಳೆ ವಿದ್ಯಾರ್ಥಿ ನಾಗರಾಜ್ ಪೂಜಾರಿ ಹಾಗೂ ಹಳೆ ವಿದ್ಯಾರ್ಥಿ, ಎಸ್.ಎಸ್.ಎಲ್.ಸಿ.ಯಲ್ಲಿ ಶೇ 90 ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು.
ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಅಮೃತ್ ರೈ, ಉದ್ಯಮಿ ಮಿತ್ತ್ ಬೈಲ್ ಬಾಲಚಂದ್ರ ಪಿ.ನಾಯಕ್, ನಿವೃತ್ತ ಶಿಕ್ಷಕ ಅಂಡಾರು ಗುಣಪಾಲ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಅಧ್ಯಕ್ಷ ರಾಜೇಶ್ ಬಂಗೇರಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ವತ್ಸಲಾ ವಾಷಿ೯ಕ ವರದಿ ಮಂಡಿಸಿದರು. ಶಿಕ್ಷಕಿ ಸುಚಿತ್ರಾ ಕಾಯ೯ಕ್ರಮ ನಿರೂಪಿಸಿದರು. ಶಕುಂತಳಾ ಹೆಗ್ಡೆ ವಂದಿಸಿದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಗೊಂಡಿತು.