
ಸ್ಕೂಟರ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ
Saturday, January 18, 2025
ಮುಕ್ಕ: ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ರೋಹನ್ ಎಸ್ಟೇಟ್ ಬಳಿ ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಗೊಂಡವರನ್ನು ಉಡುಪಿ ಜಿಲ್ಲೆಯ ಉಚ್ಚಿಲ ಬೆಳಪು ನಿವಾಸಿಗಳಾದ ಫಹಾಡ್(19), ಮಸೂದ್ (19) ಎಂದು ಗುರುತಿಸಲಾಗಿದೆ.
ಉಚ್ಚಿಲ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಮುಕ್ಕ ರೋಹನ್ ಎಸ್ಟೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡು ರಸ್ತೆಗೆ ಬಿದ್ದಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.