
ಬಪ್ಪನಾಡು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ
Saturday, January 25, 2025
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆಯಿಂದ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೂಲ್ಕಿ ಪೊಲೀಸರು ರಕ್ಷಿಸಿದ್ದಾರೆ.
ಬಪ್ಪನಾಡು ಸೇತುವೆ ಬಳಿ ಶನಿವಾರ ಮಧ್ಯಾಹ್ನ ಪಡುಬಿದ್ರಿ ನಿವಾಸಿ ಇಮ್ತಿಯಾಜ್ ಎಂಬಾತ ಏಕಾಏಕಿ ಸೇತುವೆಯ ತಡೆ ಬೇಲಿ ಮೇಲೇರಿ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿರುತ್ತಿರುವುದನ್ನು ಕಂಡು ಬಪ್ಪನಾಡು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲ್ಕಿ ಪೊಲೀಸ್ ಠಾಣೆಯ ಎಎಸ್‌ಐ ಉಮೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆತನ ಮನೆಯವರ ಬಗ್ಗೆ ಹಾಗೂ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದು ಕುಟುಂಬಸ್ಥರನ್ನು ಕರೆಸಿ ಮನವೊಲಿಸಿ ಮನೆಗೆ ವಾಪಸ್ ಕಳಿಸಿದ್ದಾರೆ.
ಕುಟುಂಬ ಕಲಹವೇ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪೊಲೀಸರು ತಿಳಿಸಿದ್ದು ಸಕಾಲದಲ್ಲಿ ಓರ್ವನ ಜೀವ ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.