
ಮಾರ್ಚ್ 23ರಿಂದ ಐಪಿಎಲ್ ಆರಂಭ: ಮಾಹಿತಿ ನೀಡಿದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ
Sunday, January 12, 2025
ನವದೆಹಲಿ: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)-2025 ಮಾರ್ಚ್ 23ರಿಂದ ಪ್ರಾರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಬಿಸಿಸಿಐ ಸಾಮಾನ್ಯ ಸಭೆಯ ನಂತರ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2025ರ ಐಪಿಎಲ್ ಪಂದ್ಯಾವಳಿ ಮಾರ್ಚ್ 23ರಂದು ಪ್ರಾರಂಭವಾಗಲಿದೆ. ಕಳೆದ ನವೆಂಬರ್‌ನಲ್ಲಿ ಸೌದಿ ಅರೇಬಿಯಾದ ಜಿದ್ದಾದಲ್ಲಿ ಎರಡು ದಿನಗಳ ಕಾಲ ಐಪಿಎಲ್ 2025ರ ಮೆಗಾ ಹರಾಜು ನಡೆದಿತ್ತು. ಒಟ್ಟು 182 ಆಟಗಾರರು 639.15 ಕೋಟಿ ರೂ.ಗೆ ಹರಾಜಾಗಿದ್ದರು. ಹರಾಜಿನ ಪೂರ್ವದಲ್ಲಿ ತಂಡಗಳು ಬಿಸಿಸಿಐ ಜೊತೆ ಹಲವು ನಿಯಮಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದ್ದವು ಎಂದು ಹೇಳಿದರು.