
ಮಂಗಳೂರು ವಿವಿಯನ್ನು ಪ್ರತಿನಿಧಿಸಲು ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
Thursday, January 23, 2025
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಅಂತಿವ ಬಿಕಾಂ ವಿದ್ಯಾರ್ಥಿ ದತ್ತಪ್ರಸಾದ್ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಹಾಗೂ ನೈರುತ್ಯ ವಲಯ ಅಂತರ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಪ್ರಥಮ ಬಿಕಾಂ ವಿದ್ಯಾರ್ಥಿ ಪ್ರಥ್ವಿ ಆಯ್ಕೆಯಾಗಿದ್ದಾರೆ.
ಇದರೊಂದಿಗೆ, ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರಿಕಾ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಅಥ್ಲೆಟಿಕ್ ಕೂಟದಲ್ಲಿ 4*400 ಮೀ. ರಿಲೇಯಲ್ಲಿ ಭಾಗವಹಿಸಿದ್ದಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಅಭಿನಂದಿಸಿದ್ದಾರೆ.