
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ
Monday, January 27, 2025
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಆವರಣದಲ್ಲಿ ಜ.26 ರಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂತ ಫಿಲೋಮಿನ ಪಿ.ಯು. ಕಾಲೇಜಿನ ಪ್ರಾಂಶುಪಾಲ ವಾ. ರಾಯನ್ ಕ್ರಾಸ್ತಾ ಅವರು ಧ್ವಜಾರೋಹಣ ನೆರವೇರಿಸಿದರು. ಸಾಂಸ್ಕೃತಿಕ ಸಂಘದ ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಹಾಡಿದರು.
ಸಭೆಯನ್ನುದ್ದೇಶಿಸಿ ಕಿರು ಸಂದೇಶ ನೀಡಿ ಮಾತನಾಡಿದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ, ಉಪ ಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೊಳೆಯಾರ್ ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಮತ್ತು ಗಣರಾಜ್ಯವನ್ನಾಗಿ ಮಾಡಿದ ನಮ್ಮ ಸಂವಿಧಾನವನ್ನು ಅಂಗೀಕರಿಸಿದ ಗಣರಾಜ್ಯೋತ್ಸವವನ್ನು ನಾವು ಇಂದು ಆಚರಿಸುತ್ತೇವೆ. ಈ ದಿನವು ನಮಗೆ ಮಾಡಿದ ತ್ಯಾಗವನ್ನು ನೆನಪಿಸುತ್ತದೆ. ಬಲವಾದ ಮತ್ತು ಏಕೀಕೃತ ರಾಷ್ಟ್ರವನ್ನು ನಿರ್ಮಿಸಲು ಕೊಡುಗೆ ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ, ತೇಜಸ್ವಿ ಭಟ್ ಅವರು ನಿರ್ವಹಿಸಿದರು. ಡಾ. ನಾರ್ಬರ್ಟ್ ಮಸ್ಕರೇನ್ಹಸ್, ರಿಜಿಸ್ಟ್ರಾರ್ (ಶೈಕ್ಷಣಿಕ) ಪ್ರೊ. ವಿನಯ ಚಂದ್ರ, ರಿಜಿಸ್ಟ್ರಾರ್(ಪರೀಕ್ಷಾಂಗ) ಹಾಗೂ ಐಕ್ಯೂಎಸಿ ಸಂಯೋಜಕಿ ಡಾ. ಮಾಲಿನಿ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಡ್‌ಗಳು, ಎನ್‌ಎಸ್‌ಎಸ್ ಸ್ವಯಂಸೇವಕರು, ಉಪನ್ಯಾಸಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜಾನ್ಸನ್ ಡೇವಿಡ್ ಸಿಕ್ವೇರಾ ಸಂಘಟಿಸಿದರು.