
ಬೈಕ್-ಬಸ್ ಢಿಕ್ಕಿ: ವಿದ್ಯಾರ್ಥಿಗಳಿಬ್ಬರಿಗೆ ಗಾಯ
Wednesday, January 8, 2025
ಪುತ್ತೂರು: ತಾಲೂಕಿನ ಹೊರವಲಯದ ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿದ್ದಾರೆ.
ಬೆಳ್ಳಿಪ್ಪಾಡಿ ನಿವಾಸಿಗಳಾದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಪುತ್ತೂರು ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಗಾಯಗೊಂಡವರು.
ಅವರು ದ್ವಿಚಕ್ರ ವಾಹನದಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಕೆಎಸ್ಸಾರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.