ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ


ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. 

ಭಾಗವಹಿಸಿದವರೆಲ್ಲರಿಗೂ ಪ್ರತಿಜ್ಞಾವಿಧಿಯನ್ನು ಬೋಧಿಸಿದ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ‘ಪ್ರಜ್ಞಾವಂತ ನಾಗರಿಕರಾದವರಲ್ಲಿ  ರಾಷ್ಟ್ರ ಹಾಗೂ ಸಮಾಜದ ಬಗೆಗಿನ ಚಿಂತನೆ ಇರಬೇಕು. ಮತದಾನ ನಮ್ಮೆಲ್ಲರ ಕರ್ವವ್ಯ ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರಾದವರೇ ಮತದಾನದಿಂದ ವಿಮುಖರಾಗುತ್ತಿರುವುದು ಖೇದಕರ. ಧರ್ಮ ಹಾಗೂ ಧಾರ್ಮಿಕ ವಿಷಯಗಳಲ್ಲಿ ತೋರುವ ಆಸಕ್ತಿಯನ್ನೇ ದೇಶದ ಕುರಿತಾಗಿಯೂ ತೋರಿದಲ್ಲಿ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ. ನಾವು ನಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುವುದರ ಕುರಿತಾಗಿ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಯಾವುದೇ ಪ್ರಲೋಭನೆಗಳಿಗೊಳಗಾಗದೆ ನಮಗೆ ಯೋತ್ಯರೆನಿಸುವ ಜನಪ್ರತಿನಿಧಿಗಳನ್ನು ಆಯ್ಕೆಮಾಡಬೇಕು’ ಎಂದು ಹೇಳಿದರು. 


ಕಾಲೇಜಿನ ಸ್ಬಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀರಾಗಾ ಪ್ರಾರ್ಥಿಸಿದರು. ಉಪಪ್ರಾಂಶುಪಾಲ ಡಾ. ವಿಜಯ ಕುಮಾರ್ ಎಂ. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವಿಭಾಗದ ಸಹಾಯಕ ಪ್ರಾಧ್ಯಾಪಕ ಶೀತಲ್ ಕುಮಾರ್ ವಂದಿಸಿದರು. ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾಪೂರ್ಣಿಮಾ ಕೆ. ಕಾರ್ಯ್ರಮ ನಿರೂಪಿಸಿದರು.


ಕಾಲೇಜಿನ ಪರೀಕ್ಷಾಂಗ ಕುಲಸಚಿವ ಪ್ರೊ. ವಿನಯಚಂದ್ರ, ಉಪಕುಲಸಚಿವ ಅಭಿಷೇಕ್ ಸುವರ್ಣ, ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೆರಾ, ಶೈಕ್ಷಣಿಕ ಉಪಕುಲಸಚಿವ ವಿಪಿನ್ ನಾಯ್ಕ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಕೆ. ಹಾಗೂ ಸ್ನಾತಕೋತ್ತರ ವಿಭಾಗಗಳ ಸಂಯೋಜಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article