
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ದೂರು ದಾಖಲು
Monday, January 6, 2025
ಉಡುಪಿ: ನೈಜ ವಿಷಯ ಮರೆಮಾಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯೋರ್ವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್ ಸೋಮವಾರ ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ
ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕನಾಗಿದ್ದು, ಕಳೆದ ಡಿ. 24ರಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾಗ ಕಾಂಚನ್ ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿಲ್ಲ. ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿರುವುದಾಗಿ ತಿಳಿಸಿದ್ದರು. ಆದರೆ, ಓರ್ವ, ಕಾಂಚನ್ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.