
ಫೆ.2 ರಂದು ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ
Saturday, January 18, 2025
ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ.2 ರಂದು ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಫೆ. ಒಂದರಂದು ಶನಿವಾರ ಬೆಳಿಗ್ಯೆ ಗಂಟೆ 9 ರಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ ಷೋಡಶ ಕಲಶಾಭಿಷೇಕ ಮತ್ತು ಸಂಜೆ ನಾಲ್ಕು ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.