
ನಾಳೆ ಜಿಲ್ಲಾ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಪರ್ವ
Sunday, January 5, 2025
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಪರ್ವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದ್ರಪ್ರಸ್ಥ ಸಭಾಂಗಣದಲ್ಲಿ ದಕ್ಷಿಣಕನ್ನಡ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದೊಂದಿಗೆ ನಡೆಯುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 9.30ಕ್ಕೆ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರಕುಮಾರ್ ಸಾಂಸ್ಕೃತಿಕ ಪರ್ವ ಉದ್ಘಾಟಿಸುವರು. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಶುಭಾಶಂಸನೆ ಮಾಡುವರು.
ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮದ ಸಂಯೋಜಕಿ ಎಸ್.ಡಿ.ಎಂ. ಕಾಲೇಜಿನ ಗಾನವಿ ಡಿ. ಮತ್ತು ಪ್ರಸಾದ್ ಕುಮಾರ್ ತಿಳಿಸಿದ್ದಾರೆ.