
ಲಾರಿ ಸ್ಕೂಟರ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು
Wednesday, January 1, 2025
ಉಳ್ಳಾಲ: ಲಾರಿ-ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮೃತ ಸವಾರನನ್ನು ಪಾನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಎಂದು ಗುರುತಿಸಲಾಗಿದೆ.
ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಮಂಗಳವಾರ ರಾತ್ರಿ ತಲಪಾಡಿ ಯಿಂದ ಬರುತ್ತಿದ್ದ ವೇಳೆ ಸಂಕೋಲಿಗೆ ಹಾಲ್ ಬಳಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಸ್ಕೂಟರ್ ಗೆ ತಾಗಿದೆ. ಈ ವೇಳೆ ಸವಾರ ಉಮ್ಮರ್ ಫಾರೂಕ್ ಯಾನೆ ಅಝರ್ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭ ಲಾರಿಯ ಹಿಂಬದಿ ಚಕ್ರ ಅವರ ಮೇಲೆ ಚಲಿಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅವರ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಕಾರಣವಾದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.