
ಸಂವಿಧಾನವನ್ನು ಗೌರವಿಸಬೇಕಾದ ಜವಾಬ್ದಾರಿ ನಮ್ಮದು: ಸ್ಪೀಕರ್ ಯು.ಟಿ. ಖಾದರ್
ಉಳ್ಳಾಲ: ಭಾರತದ ಸಂವಿಧಾನವನ್ನು ಗ್ರಂಥ ಎಂದು ಭಾವಿಸಿ ಅದಕ್ಕನುಗುಣವಾದ ವ್ಯಕ್ತಿತ್ವ ರೂಪಿಸಬೇಕು. ಇಂದು ರೈತರು, ಕಾರ್ಮಿಕರು, ವ್ಯಾಪಾರಿಗಳು ಒಬ್ಬಂಟಿಯಾಗಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಓಡಾಡಲು ಅಂಬೇಡ್ಕರ್ ಅವರ ಸಂವಿಧಾನ ಕಾರಣ. ಅದನ್ನು ಗೌರವಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಅವರು ಓವರ್ ಬ್ರಿಡ್ಜ್ ಬಳಿ ನಡೆದ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಇಂದು ವಿಶ್ವವೇ ಭಾರತಕ್ಕೆ ಗೌರವ ಕೊಡುತ್ತಿದೆ.ಇದಕ್ಕೆ ಇಲ್ಲಿನ ಯುವ ಪ್ರಜೆಗಳು, ವಿದ್ಯಾರ್ಥಿಗಳು ಕಾರಣ.ಈ ವಿದ್ಯಾರ್ಥಿಗಳಿಂದ ಬಲಿಷ್ಠ ಭಾರತ ನಿರ್ಮಾಣ ಆಗುತ್ತಿದೆ. ಉಳ್ಳಾಲ ನಗರಕ್ಕೆ 24 ಗಂಟೆ ಕುಡಿಯುವ ನೀರು, ಅಂಡರ್ ಗ್ರೌಂಡ್ ಕೇಬಲ್ ಮೂಲಕ ವಿದ್ಯುತ್ ಪೂರೈಕೆ ಸಹಿತ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಉಳ್ಳಾಲವನ್ನು ಸ್ಮಾರ್ಟ್ ಸಿಟಿ ಮಾಡಲು ನಿರ್ಧರಿಸಲಾಗಿದೆ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಶೀಘ್ರ ಭೇದಿಸಿದ ಪೊಲೀಸರಿಗೆ ಗೌರವ ಕೊಡುವ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ತಹಶೀಲ್ದಾರ್ ಪುಟ್ಟರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ಎಸಿಪಿ ಧನ್ಯ, ಇನ್‌ಸ್ಪೆಕ್ಟರ್ ಬಾಲಕೃಷ್ಣ, ನಗರಸಭೆ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸಪ್ನಾ ಹರೀಶ್, ಪೌರಾಯುಕ್ತ ಮತಡಿ, ಕಂದಾಯ ನಿರೀಕ್ಷಕ ಪ್ರಮೋದ್, ತಾ.ಪಂ.ಇ.ಒ ಗುರುದತ್ತ್ ಎಂ.ಎನ್. ಸಿಡಿಪಿಒ ಶೈಲಾ ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ ಮತ್ತಿತರರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ತ್ಯಾಗಂ ಹರೇಕಳ, ಮೋಹನ್ ಶಿರ್ಲಾಲು, ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.