ಜುಗಾರಿ ಅಡ್ಡೆಗೆ ದಾಳಿ: 10 ಮಂದಿ ಬಂಧನ

ಜುಗಾರಿ ಅಡ್ಡೆಗೆ ದಾಳಿ: 10 ಮಂದಿ ಬಂಧನ

ಬಂಟ್ವಾಳ: ತಾಲೂಕು ಕೊಡ್ಮಣ್ ಗ್ರಾಮದ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಉಲಾಯಿ-ಪಿದಾಯಿ ಆಟದಲ್ಲಿ ನಿರತರಾಗಿದ್ದ 10 ಮಂದಿಯ ಬಂಧಿಸಿ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಮತ್ತವರ ತಂಡ ಈ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿಯ ವೇಳೆ ಮೂವರು ಪರಾರಿಯಾಗಿದ್ದು, 10 ಮಂದಿಯನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಆಟದಲ್ಲಿ ಪಣವಾಗಿರಿಸಿದ್ದ ನಗದು 20,500 ರೂ. ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article