ಅಸೌಖ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿ ಸಾವು

ಅಸೌಖ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿ ಸಾವು


ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.

ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ (26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ.

ಅವಿವಾಹಿತನಾಗಿದ್ದ ಅಭಿಷೇಕ್ ಅವರು 2020 ರಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು. ಅ ಬಳಿಕ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು.

ಅ ಬಳಿಕ ಸುಮಾರು 8 ತಿಂಗಳಿನಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.

ಅಭಿಷೇಕ್ ಅವರ ತಂದೆ ಕೂಡ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದು, ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ. 

ಅಭಿಷೇಕ್ ಅವರ ಮೃತದೇಹವನ್ನು ಹುಟ್ಟೂರು ದಾವಣಗೆರೆ ಜಿಲ್ಲೆಗೆ ಕೊಂಡು ಹೋಗಿದ್ದು, ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article