ಪದ್ಮಶ್ರೀ ಪುರಸ್ಕೃತನ ಪತ್ನಿ ಆಸ್ಪತ್ರೆಯಿಂದ ಬಿಡುಗಡೆ

ಪದ್ಮಶ್ರೀ ಪುರಸ್ಕೃತನ ಪತ್ನಿ ಆಸ್ಪತ್ರೆಯಿಂದ ಬಿಡುಗಡೆ

ಬಂಟ್ವಾಳ: ತಲೆಯ ಭಾಗದ ನರದ ತೊಂದರೆಯಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪದ್ಮಶ್ರೀ  ಪ್ರಶಸ್ತಿ ಪುರಸ್ಕೃತ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಪತ್ನಿ ಈಗ ಚೇತರಿಸಿ ಕೊಂಡು ಆಸ್ಪತ್ರೆಯಿಂದ ಸೋಮವಾರ ಬಿಡುಗಡೆ ಆಗಿದ್ದಾರೆ. 

ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಲು ಪಡಿಪಾಟಲು ಅನುಭವಿಸಿದ ಅಮೈ ಮಹಾಲಿಂಗ ನಾಯ್ಕರ ನೆರವಿಗೆ ಸಹೃದಯ ಜನತೆ ಮಿಡಿದಿದ್ದು, 5.30 ಲಕ್ಷ ರೂ.ಗಳಷ್ಟು ನೆರವಿನ ಮೊತ್ತ ಸಂಗ್ರಹವಾಗಿದೆ.

ನರದ ತೊಂದರೆಯಿಂದ ಅಮೈ ಮಹಾಲಿಂಗ ನಾಯ್ಕರ ಪತ್ನಿ ಒಂದು ವಾರದ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಎರಡೇ ದಿನದಲ್ಲಿ ಮಂಗಳೂರು ಹೊರವಲಯ ಅಡ್ಯಾರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಆರಂಭದಲ್ಲಿ 2.62 ಲಕ್ಷ ರೂ. ಮೊತ್ತವನ್ನು ಅವರಿವರಿಂದ ಸಾಲ ಪಡೆದು ಅಮೈ ಮಹಾಲಿಂಗ ನಾಯ್ಕರೇ ಭರಿಸಿದ್ದರು. ಬಳಿಕ ಮತ್ತೆ ಚಿಕಿತ್ಸೆಗೆ ಹಣಕಾಸಿನ ಅನಿವಾರ್ಯತೆ ಇತ್ತು. ಅದಕ್ಕಾಗಿ ಮಾಧ್ಯಮಗಳಲ್ಲಿ ನೆರವು ಕೋರಿ ವರದಿ ಪ್ರಕಟವಾಗಿತ್ತು.

ಅಮೈ ಮಹಾಲಿಂಗ ನಾಯ್ಕರ ಸಂಬಂಧಿಸಿಕರು 70 ಸಾವಿರ ರೂ. ಸೇರಿಸಿದ್ದರು. ಆಸ್ಪತ್ರೆ ಮೊತ್ತ ಒಟ್ಟು 5.30 ಲಕ್ಷ ರೂ. ಆಗಿತ್ತು. ಅದರಲ್ಲಿ 70 ಸಾವಿರ ರು. ಮೊತ್ತವನ್ನು ಜಿಲ್ಲಾ ಆರೋಗ್ಯಾಧಿಕಾರಿಗಳ ಮನವಿ ಮೇರೆಗೆ ವಿನಾಯಿತಿ ನೀಡಿದ್ದರು. ಉಳಿದ ಮೊತ್ತವನ್ನು ಅಮೈ ಮಹಾಲಿಂಗ ನಾಯ್ಕರು ಪಾವತಿಸಿದ್ದಾರೆ. ಅವರ ಪತ್ನಿ ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಔಷಧ ಮತ್ತಿತರ  ಕಾರಣಕ್ಕೆ ಬೇರೆಯೇ ವೆಚ್ಚ ಆಗಿದೆ. ಸಮಾಜದಿಂದ ಉದಾರವಾಗಿ ಆರ್ಥಿಕ ನೆರವು ನೀಡಿರುವುದಕ್ಕೆ ಅಮೈ ಮಹಾಲಿಂಗ ನಾಯ್ಕರ ಕುಟುಂಬಸ್ಥರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article