
ಚರಂಡಿಗೆ ಬಿದ್ದ ರಿಕ್ಷಾ: ಚಾಲಕ ಸಾವು
Saturday, February 15, 2025
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟರೆ, ಮೂವರು ಮಕ್ಕಳು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಅಪಘಾತ ನಡೆದಿದ್ದು, ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ ( 37) ಮೃತಪಟ್ಟಿರುವ ರಿಕ್ಷಾ ಚಾಲಕರಾಗಿದ್ದಾರೆ.
ಇವರ ಸಂಬಂಧಿ ಮಕ್ಕಳಾದ ತುಷಾರ್,ಭವಿತ್ ಮತ್ತು ಪ್ರದೀಪ್ ಎಂಬವರು ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಮೃತ ರಿಕ್ಷಾ ಚಾಲಕ ಅವಿವಾಹಿತರಾಗಿದ್ದಾರೆ
ಮೂಡಬಿದ್ರೆ ಸಮೀಪದ ಮಿಜಾರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಹೋಗಿ ವಾಪಸು ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆಯೆನ್ನಲಾಗಿದೆ.ಮನೆಗೆ ಸುಮಾರು 500 ಮೀ.ದೂರದಲ್ಲಿ ಈ ಅಪಘಾತ ಸಂಭವಿಸಿದೆ.
ಅಟೋರಿಕ್ಷಾದ ಮೂರು ಚಕ್ರಗಳು ಮೇಲ್ಮುಖವಾಗಿ ಚರಂಡಿಗೆ ಮಗುಚಿ ಬಿದ್ದಿದ್ದು,ಪರಿಣಾಮ ಚಾಲಕ ರಿಕ್ಷಾದಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದಂತೆ ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಂಟ್ವಾಳ ಟ್ರಾಫಿಕ್ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.