
ಫೆ.7ರಂದು ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ
ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಫೆ.6 ರಿಂದ ಫೆ.7 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಫೆ.6 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಗಣಯಾಗ, ಗುರು ಸನ್ನಿಧಿಯಲ್ಲಿ ಕಲಾವೃದ್ಧಿ ಹೋಮ, ನವಕ ಪ್ರಧಾನ ಕಲಶಾಭಿಷೇಕ. ಸಪರಿವಾರ ದೇವರಾದ ಶ್ರೀ ಕಾಲಭೈರವೇಶ್ವರ, ಶ್ರೀ ಆಂಜನೇಯ, ಶ್ರೀ ನಾಗ ದೇವರಿಗೆ ಕಲಶಾಭಿಷೇಕ, ಮಹಾಪೂಜೆ. ಸಂಜೆ ಸ್ಥಾನ ಶುದ್ದಿ, ಪ್ರಾಸಾದ ಶುದ್ದಿ, ವಾಸ್ತುಪೂಜೆ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಅಧಿವಾಸ ಹೋಮ ನಡೆಯಲಿದೆ.
ಫೆ.7 ರಂದು ಬೆಳಿಗ್ಗೆ 7 ಗಂಟೆಗೆ ಪುಣ್ಯಾಹ, ಬ್ರಹ್ಮಕಲಶಾಭಿಷೇಕ, ಸಾಮೂಹಿಕ ‘ಚಂಡಿಕಾಯಾಗ’ ಪೂರ್ಣಾಹುತಿ, ಪಲ್ಲಪೂಜೆ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ. ತೀರ್ಥ-ಪ್ರಸಾದ ವಿತರಣೆ ಬಳಿಕ ಸೇವಾ ಕರ್ತರಿಂದ ಸಾರ್ವಜನಿಕ ಮಹಾ ‘ಅನ್ನಸಂತರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ-ಮದ್ದುಗುಡ್ಡೆ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಹೂವಿನ ಪೂಜೆ, ವಿಶೇಷ ರಂಗಪೂಜೆ ನಡೆಯಲಿರುವುದು. ಹಾಗೂ ರಾತ್ರಿ ಗಂಟೆ 9 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ-ಸೌಕೂರು ಇವರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.