ಮಾಲಾಡಿ: ಕೊಲ್ಪದಬೈಲು ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪದ ಅರ್ತಿಲ ಎಂಬಲ್ಲಿ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆ ಸಾಗುತ್ತಿದ್ದ ನಂದಿನಿ ಹಾಲು ಇದ್ದ ಗಾಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಯಾವುದೇ ಅನಾಹುತ ಸಂಬವಿಸಿಲ್ಲ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.