
ಮಾ.1 ರಂದು ಪುತ್ತೂರಿನಲ್ಲಿ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟು ಅವರಿಗೆ ಅಭಿವಂದನಾ ಕಾರ್ಯಕ್ರಮ
ಮಂಗಳೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್‌ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೋಟ್ಟು ಅವರಿಗೆ ‘ಅಭಿವಂದನಾ ಸಮಾರಂಭ’ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಮಾ.1 ರಂದು ಬೆಳಗ್ಗೆ 10.30ಕ್ಕೆ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ, ಪುತ್ತೂರು ಇಲ್ಲಿ ನಡೆಯಲಿದೆ ಎಂದು ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ಅಭಿವಂದನಾ ಸಮಿತಿಯ ಅಧ್ಯಕ್ಷ ಎಸ್.ಬಿ. ಜಯರಾಮ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮಾರಂಭವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಶಾಮ್ ಭಟ್, ಐಎಎಸ್ (ನಿ.) ಇವರು ಅಭಿವಂದಿಸಲಿರುವರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಇವರು ಅಭಿವಂದನಾ ಭಾಷಣ ಮಾಡಲಿರುವರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಇವರು ಶುಭಾಶಂಸನೆಗೈಯಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಮಾಸ್ ಲಿ., ಮಂಗಳೂರು ಇದರ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಇವರು ಭಾಗವಹಿಸಲಿರುವರು.