.jpeg)
ಕೇಂದ್ರ ಬಿಜೆಪಿಯಿಂದ ಬಿಹಾರಕ್ಕೆ ಬಜೆಟ್ ನಲ್ಲಿ ಬಂಪರ್ ಕೊಡುಗೆ-ಅಭಿವೃದ್ಧಿ ಪಥದಲ್ಲಿರುವ ರಾಜ್ಯಗಳ ಕಡೆಗಣನೆ: ಕೆ. ಹರೀಶ್ ಕುಮಾರ್
Saturday, February 1, 2025
ಮಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಚುನಾವಣಾ ಹೊಸ್ತಿಲಲ್ಲಿರುವ ಬಿಹಾರಕ್ಕೆ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಿದೆ. ಆ ಮೂಲಕ ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ಪ್ರಕೃತಿ ವಿಕೋಪದಿಂದ ರೈತರು ತತ್ತರಿಸಿದ್ದು, ರೈತರ ಕೃಷಿ ಸಾಲ ಮನ್ನಾ ಬಗ್ಗೆ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಕರ್ನಾಟಕ ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳನ್ನು ಕಡೆಗಣಿಸಲಾಗಿದ್ದು, ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿರುವ ತಾರತಮ್ಯ ನೀತಿಯನ್ನು ಮತ್ತೆ ಮುಂದುವರಿಸುತ್ತಿದೆ. ಇದೊಂದು ನಿರಾಶಾದಾಯಕವಾದ ಬಜೆಟ್ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.