ದ.ಕ. ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ

ದ.ಕ. ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ

ಮಂಗಳೂರು: ಫೆ.25 ರಂದು ಬಿಜೆಪಿ ಕಾರ್ಯಾಲಯದಲ್ಲಿ ದ.ಕ. ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆಯು ನಡೆಯಿತು. 

ಈ ಸಭೆಯಲ್ಲಿ ಇತ್ತೀಚೆಗೆ ನಡೆದ ಸಹಕಾರ ಸಂಘಗಳ ಚುನಾವಣೆಗಳಲ್ಲಿ ಹಲವು ಕಡೆಗಳಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡದ್ದಕ್ಕೆ ಶ್ಲಾಘನೆಯನ್ನು ಹಾಗೂ ಅಭಿನಂದನೆಯನ್ನು ವ್ಯಕ್ತ ಪಡಿಸಲಾಯಿತು. 

ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಸಹಕಾರ ಸಂಘಗಳಲ್ಲಿ ನಡೆದ ಚುನಾವಣೆಯಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆದ್ದು ಮೇಲುಗೈ ಸಾಧಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರವಾಗಿದೆ. ಈ ಮೂಲಕ ನಮ್ಮ ಜಿಲ್ಲೆಯಲ್ಲಿ ಜನರ ಒಲವು ಬಿಜೆಪಿಯ ಕಡೆಗೆ ನಿಚ್ಚಳವಾಗಿರುವುದು ಕಂಡುಬಂದಿರುತ್ತದೆ. ಇದು ಮುಂಬರುವ ಪಂಚಾಯತ್ ಹಾಗೂ ಪಾಲಿಕೆ ಚುನಾವಣೆಗಳಲ್ಲಿಯೂ ಬಿಜೆಪಿಯ ಗೆಲುವಿನ ಓಟ ಮುಂದುವರಿಯುವುದರಲ್ಲಿ ಯಾವುದೇ ಸಂಶಯವಿಲ್ಲಾ ಎಂದು ಹೇಳಿದರು.

ಭಾರತದಲ್ಲಿ ಮಹಾಪರ್ವವಾಗಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಮ್ಮ ಜಿಲ್ಲೆಯಿಂದಲೂ ಅನೇಕ ಜನ ಭಕ್ತಾದಿಗಳು ಭಾಗವಹಿಸಿದ್ದು ಹಾಗೂ ಅಲ್ಲಿನ ವ್ಯವಸ್ಥೆ ಹಾಗೂ ಕೋಟ್ಯಂತರ ಜನರು ಭಾಗವಹಿಸುತ್ತಿರುವ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗಳಿಂದಾಗಿ ಭವ್ಯವಾಗಿ ಮನಸೂರೆಗೊಳ್ಳುವಂತೆ ಈ ಮಹಾಕುಂಭವನ್ನು ನೆರವೇರಿಸಿದ ಉತ್ತರ ಪ್ರದೇಶದ ಯೋಗಿ ಸರಕಾವನ್ನು ಬಿಜೆಪಿ ಪಧಾಧಿಕಾರಿಗಳ ಸಭೆಯಲ್ಲಿ ಸರ್ವರೂ ಅಭಿನಂದನೆಯನ್ನು ವ್ಯಕ್ತ ಪಡಿಸಿದರು. 

ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು ಮತ್ತು ಪ್ರಧಾನ ಕಾರ್ಯದರ್ಶಿ ಯತೀಶ ಆರ್ವಾರ್ ಅವರು ಹಾಗೂ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article