
ಉಡುಪಿ ಜಿಲ್ಲೆಯ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದ ಶಾಸಕ ಭಂಡಾರಿ
Monday, February 17, 2025
ಮಂಗಳೂರು: ಫೆ.17 ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನೆಡೆಸಿದ ಲೋಕೋಪಯೋಗಿ ಇಲಾಖೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರು ಭಾಗವಹಿಸಿ ಉಡುಪಿ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಹಲವು ರಸ್ತೆಗಳು ಅತೀವೃಷ್ಟಿಯಿಂದ ಹಾನಿಗೊಳಗಾಗಿದ್ದು, ಸಾರ್ವಜನಿಕರ ಹಾಗೂ ವಾಹನಗಳ ಓಡಾಟಕ್ಕೆ ತೀವೃ ತೊಂದರೆಯಾಗಿರುವ ಕುರಿತು ಸಚಿವರ ಗಮನಕ್ಕೆ ತಂದರು.
ಹಾನಿಗೊಳಗಾದ ರಸ್ತೆಗಳ ನಿರ್ವಹಣೆಗೆ ಆದ್ಯತೆ ಮೇಲೆ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಜಿಲ್ಲೆಯ ರಸ್ತೆ ಕಾಮಗಾರಿಗಳ ಸಮಗ್ರ ಯೋಜನೆಯನ್ನು ಹಾಗೂ ಕುಂದಾಪುರ ಪ್ರವಾಸಿ ಮಂದಿರ ಕಾಮಗಾರಿಯನ್ನು ಪೂರ್ಣಗೊಳಿಸಲು 2 ಕೋಟಿ ರೂ.ಗಳ ಹೆಚ್ಚುವರಿ ಅನುದಾನದ ಅಗತ್ಯತೆಯನ್ನು ಸಚಿವರ ಮುಂದೆ ಪ್ರಸ್ತುತಪಡಿಸಿ ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿದರು.
ಉಡುಪಿ ಜಿಲ್ಲೆಯ ಶಾಸಕರುಗಳು, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಉಡುಪಿ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.