ಸಹಕಾರ ಕ್ಷೇತ್ರ ಜನರ ವಿಶ್ವಾಸ ನಂಬಿಕೆಯ ಕ್ಷೇತ್ರ: ಡಾ. ಎಂ.ಎನ್. ರಾಜೇಂದ್ರಕುಮಾರ್

ಸಹಕಾರ ಕ್ಷೇತ್ರ ಜನರ ವಿಶ್ವಾಸ ನಂಬಿಕೆಯ ಕ್ಷೇತ್ರ: ಡಾ. ಎಂ.ಎನ್. ರಾಜೇಂದ್ರಕುಮಾರ್


ಮಂಗಳೂರು: ಸಹಕಾರಿ ಸಂಸ್ಥೆಗಳು ಸಹಕಾರ ತತ್ವ ಮತ್ತು ಮೌಲ್ಯಗಳಿಂದ ನಿಯಂತ್ರಿಸಲ್ಪಟ್ಟಿರುವುದರಿಂದ ಸಹಕಾರ ಕ್ಷೇತ್ರ ಜನರ ವಿಶ್ವಾಸ ನಂಬಿಕೆಯ ಕ್ಷೇತ್ರವಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಸಹಕಾರ ಕ್ಷೇತ್ರದ ಮಹತ್ವವನ್ನು ಅರಿತು ಕಾರ್ಯದಕ್ಷತೆಯಿಂದ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಅವರು ವಹಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ವಿಶೇಷವಾದ ತರಬೇತಿ ಕಾರ್ಯಕ್ರಮವನ್ನು ಜಿಲ್ಲೆಯ ಫ್ಯಾಕ್ಸ್ ಸಂಸ್ಥೆಗಳಿಗೆ ಆಯೋಜಿಸಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಇಂತಹ ತರಬೇತಿ ಶಿಬಿರಗಳು ಹೆಚ್ಚು ಉಪಯುಕ್ತವಾಗಿದೆ ಎಂದರು.

ಡಾ. ಎಂಎನ್‌ಆರ್ ಅವರಿಗೆ ಅಭಿನಂದನೆ:

ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ನೂತನ ಎಸ್‌ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರನ್ನು ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಪರವಾಗಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೋಟ್ಟು ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಜಯಕರ ಶೆಟ್ಟಿ ಬಿ. ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್. ರಮೇಶ್, ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಬೆಂಗಳೂರು ಸಹಕಾರ ಸಂಘಗಳ ಉಪನಿಬಂಧಕರಾದ ಬಿ. ಕೆ.ಸಲೀಂ, ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪಿ.ಆರ್. ಪಳಂಗಪ್ಪ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಕುಶಲಪ್ಪ ಗೌಡ, ಯೂನಿಯನ್ ಉಪಾಧ್ಯಕ್ಷ ನೀಲಯ ಎಂ. ಅಗರಿ, ನಿರ್ದೇಶಕರಾದ ಡಾ. ಎಸ್.ಆರ್. ಹರೀಶ್ ಆಚಾರ್ಯ, ಚಿತ್ತರಂಜನ್ ಬೋಳಾರ್, ಕೆ. ಸಂಜೀವ ಪೂಜಾರಿ, ವಿಷ್ಣು ಭಟ್, ಸತೀಶ್ ಕೆ. ಮತ್ತಿತರರು ಉಪಸ್ಥಿತರಿದ್ದರು.

ಎಸ್.ಆರ್. ಹರೀಶ್ ಆಚಾರ್ಯ ಸ್ವಾಗತಿಸಿದರು. ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article