
ನೂತನ ಮೂರು ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಕಾಮತ್
Monday, February 3, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇದು 2022-23ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲವೂ ಹಂತ ಹಂತವಾಗಿ ಅನುಷ್ಠಾನಕ್ಕೆ ಬರುತ್ತಿದ್ದು ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ, ಡಾ. ಕಿಶೋರ್ ಕುಮಾರ್, ಜೇಮ್ಸ್ ಕುಟಿನ್ಹಾ, ವೇದಾವತಿ ರಾವ್, ಮಹಮ್ಮದ್ ಸಿಕಂದರ್, ಕೃಷ್ಣ ಹೆಗ್ಡೆ, ಸುರೇಶ್ಚಂದ್ರ ಶೆಟ್ಟಿ, ಮುಕೇಶ್, ಆಶ್ರಯ ಭಂಡಾರಿ, ಉಮೇಶ್ ಗಟ್ಟಿ, ಮೇಘ ಗೋಕುಲ್, ಆಶಾ ನಾಗರಾಜ್, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರು ಮತ್ತಿತರರು ಉಪಸ್ಥಿತರಿದ್ದರು.