ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹೀಂ ನವಾಝ್ ಆಯ್ಕೆ

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹೀಂ ನವಾಝ್ ಆಯ್ಕೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ ನವಾಝ್ ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರಿಯಂಗಳ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 

ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಅವರು ಬಂಟ್ವಾಳ ಹ್ಯೂಮನ್ ವೆಲ್ಫೇರ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾಗಿ, ಆಸರೆ ಸೇವಾ ಫೌಂಡೇಶನ್ ಕಾರ್ಯದರ್ಶಿ, ನವೋದಯ ಅಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಗೌರವಧ್ಯಕ್ಷರಾಗಿ, ಬಂಟ್ವಾಳ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಸದಸ್ಯ, ತೆಂಗು ಬೆಳೆಗಾರರ ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ 2024ರ ಆಗಸ್ಟ್ ತಿಂಗಳಿನಲ್ಲಿ ಮತದಾನ ನಡೆದಿತ್ತು. ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article