ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸಚಿವರು ಸೂಚನೆ

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸಚಿವರು ಸೂಚನೆ


ಮಂಗಳೂರು: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾದಶ೯ನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಜನತಾದಶ೯ನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದು, ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯು ಪೂವಾ೯ನುಮತಿ ಪಡೆಯದೆ ಗೈರು ಹಾಜರಾಗಿದ್ದರು.

ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸಚಿವರು ಜಿಲ್ಲಾಧಿಕಾರಿಗಳಿಗೆ ನಿದೇ೯ಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article