
ವಿದ್ಯಾರ್ಥಿ ನಾಪತ್ತೆ ಹಿಂದೆ ಗಾಂಜಾ ತಂಡ: ವಿಶ್ವ ಹಿಂದೂ ಪರಿಷದ್ ಅನುಮಾನ ವ್ಯಕ್ತ
Friday, February 28, 2025
ಮಂಗಳೂರು: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಮೂರು ದಿನ ಕಳೆದರೂ ಪತ್ತೆಯಾಗಿಲ್ಲ. ಇದರ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂದು ವಿಶ್ವ ಹಿಂದೂ ಪರಿಷದ್‌ನ ಶರಣ್ ಪಂಪವೆಲ್ ಅನುಮಾನ ವ್ಯಕ್ತಪಡಿಸಿದ್ದಾರೆ.
ಫರಂಗಿಪೇಟೆಯ ಸುತ್ತಮುತ್ತ ಡ್ರಗ್ಸ್, ಗಾಂಜಾ ವ್ಯಸನಿಗಳ ಒಂದು ದೊಡ್ಡ ತಂಡವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಆದ್ದರಿಂದ ಈ ನಾಪತ್ತೆಯ ಹಿಂದೆ ಹಲವು ಸಂಶಯಗಳು ವ್ಯಕ್ತವಾಗುತ್ತಿದೆ. ಇದರ ಹಿಂದೆ ಗಾಂಜಾ ವ್ಯಸನಿಗಳ ತಂಡದ ಕೈವಾಡ ಇರಬಹುದು ಎಂದಿದ್ದಾರೆ.
ವಿದ್ಯಾರ್ಥಿ ನಾಪತ್ತೆಯಾದ ಸಮಯದಲ್ಲಿ ಅಪರಿಚಿತ ಕ್ವಾಲ್ಲಿಸ್ ಕಾರು ಆ ಜಾಗದಲ್ಲಿ ಓಡಾಡಿದ್ದು ಆಂಜನೇಯ ದೇವಸ್ಥಾನದ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೋಲೀಸ್ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಿ ನಾಪತ್ತೆಯಾದವನನ್ನು ಶೀಘ್ರವಾಗಿ ಪತ್ತೆಹಚ್ಚಬೇಕೆಂದು ಅವರು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.