
ಡಾ. ಸಿದ್ಧರಾಜುಗೆ ಪ್ರಶಸ್ತಿ
Tuesday, February 11, 2025
ಮಂಗಳೂರು: ನಗರದ ವಿಶ್ವವಿದ್ಯಾಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಡಾ. ಸಿದ್ದರಾಜು ಎಂ.ಎನ್. ಅವರಿಗೆ ಕೇರಳದ ಜಾಸ್ಮಿಯಾ ಸಲಾಫಿಯಾ ಫಾರ್ಮಸಿ ಕಾಲೇಜಿನಲ್ಲಿ ಫಾರ್ಮಿಸಿ ಮತ್ತು ಆರೋಗ್ಯ ವಿಜ್ಞಾನ ವಿಭಾಗಗಳ ವತಿಯಿಂದ ಏರ್ಪಡಿಸಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಉತ್ತಮ ಸಂಶೋಧನಾ ಪ್ರಬಂಧ ಮಂಡನೆ ಪ್ರಶಸ್ತಿ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.