.jpg)
ಸಿಲಿಂಡರ್ ಸೋರಿಕೆ: ಮನೆ ಸೊತ್ತು ಭಸ್ಮ
Tuesday, February 11, 2025
ಮಂಗಳೂರು: ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ಬಂಟ್ವಾಳ ಸಜೀಪಮೂಡ ಗ್ರಾಮದ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್ ನಗರ ನಿವಾಸಿ ಗಣೇಶ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂದಿಸಲು ಹೋದ ಗಣೇಶ್ ಅವರ ಕೈಗೆ ಗಾಯವಾಗಿದೆ. ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಬೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
ಮನೆಯ ಗ್ಯಾಸ್ ಗೀಸರ್, ಫ್ರಿಡ್ಜ್ ಸುಟ್ಟು ಭಸ್ಮವಾಗಿದ್ದು, ಸುಮಾರು 75 ಸಾವಿರ ರೂ .ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.