
ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ ‘ಹೊಂಬೆಳಕು’ ಟಿ-ಶರ್ಟ್ ಬಿಡುಗಡೆ
ಮಂಗಳೂರು: ಗ್ರಾಮ ಸ್ವರಾಜ್ ಪ್ರತಿಷ್ಠಾನದ ವತಿಯಿಂದ ಫೆ.22 ರಂದು ಮಂಗಳೂರಿನ ಅಡ್ಯಾರ್‌ನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆಯಲಿರುವ ದ.ಕ. ಮತ್ತು ಉಡುಪಿ ಜಿ.ಪಂ. ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಪಂಚಾಯತ್, ನಗರ ಸ್ಥಳೀಯಾಡಳಿತದ ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ ‘ಹೊಂಬೆಳಕು’ ಟಿ-ಶರ್ಟ್‌ನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಬಿಡುಗಡೆ ಮಾಡಿದರು.
ಅವರು ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಈ ಕಾರ್ಯಕ್ರಮಕ್ಕೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸಚಿವ ಪ್ರಯಾಂಕ ಖರ್ಗೆ, ಹಿಂದುಳಿದ ವರ್ಗ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ ಭಾಗವಹಿಸಲಿದ್ದು, ಇವರೊಂದಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಸಂಸದರುಗಳಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಎರಡು ಜಿಲ್ಲೆಗಳ ಮುಖ್ಯಕಾರ್ಯನಿರ್ವಣಾಧಿಕಾರಿಗಳು, ಎಲ್ಲಾ ಗ್ರಾ.ಪಂ.ನ ಪಿಡಿಓ, ಗ್ರಾಮ ಕಾರಣಿಕರು, ಸಿಬ್ಬಂದಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ಪರ್ಧಿಸಿದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಪಥಸಂಚಲನ ನಡೆಯಲಿದ್ದು, ಮೊದಲ ಸ್ಥಾನ ಪಡೆದವರಿಗೆ 50 ಸಾವಿರ ಬಹುಮಾನ, ದ್ವಿತೀಯ ಸ್ಥಾನ ಪಡೆದವರಿಗೆ 25 ಸಾವಿರ ಬಹುಮಾನ ವಿತರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಜಾನಪದ ಕ್ರೀಡೆ ಹಾಗೂ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಧ್ಯತೆ ನೀಡಲಾಗಿದೆ. ಈಗಾಗಲೇ 358 ಗ್ರಾಮ ಪಂಚಾಯತ್‌ಗಳಲ್ಲಿ 353 ಗ್ರಾಮ ಮಂಚಾಯತ್‌ಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಉತ್ತಮ ತಾಲೂಕಿಗೆ ಬಹುಮಾನ:
2 ಜಿಲ್ಲೆಗಳಲ್ಲಿಯೂ ಪ್ರತ್ಯೇಕವಾಗಿ ಆ ಜಿಲ್ಲೆಯ ಯಾವ ತಾಲೂಕು ಉತ್ತಮ ಕೆಲಸ ಮಾಡಿ ಅಭಿವೃದ್ಧಿ ಹೊಂದಿದೆ ಆ ತಾಲೂಕಿಗೆ ಬಹುಮಾನವನ್ನು ನೀಡಲಾಗುವುದು ಎಂದು ಮಂಜುನಾಥ ಭಂಡಾರಿ ತಿಳಿಸಿದರು.
ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್‌ಚಂದ್ರ ಶೆಟ್ಟಿ ಕುಳಾಲು, ಕೋಶಾಧಿಕಾರಿ ಪ್ರವೀಣ್ ಚಂದ್ರ ಆಳ್ವ, ಕಾರ್ಯದರ್ಶಿ ಲಾರೆನ್ಸ್ ಡಿ’ಸೋಜ, ಟ್ರಸ್ಟಿ ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.