
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮೊಹಮ್ಮದ್ ಬಶೀರ್ ಕಣ್ಣೂರು ಆಯ್ಕೆ
ಮಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ಅನ್‌ಲೈನ್‌ನಲ್ಲಿ ನಡೆದಿದ್ದ ಚುನಾವಣೆಯಲ್ಲಿ 9035 ಮತ ಪಡೆಯುವ ಮೂಲಕ ಮೊಹಮ್ಮದ್ ಬಶೀರ್ ಕಣ್ಣೂರು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, `ಬೀಯಿಂಗ್ ಹ್ಯೂಮನ್ ಫೌಂಡೇಶನ್ ಇದರ ಮಂಗಳೂರು ನಗರ ಅಧ್ಯಕ್ಷರಾಗಿ, ಮಂಗಳೂರು ಬ್ಯಾರಿ ಸೆಂಟ್ರಲ್ ಕಮಿಟಿ ಇದರ ಸದಸ್ಯರಾಗಿ, ಮೇಕ್ ಎ ಚೇಂಜ್ ಇದರ ಸಹ ಸ್ಥಾಪಕರಾಗಿ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.
ಯುವಕರನ್ನು ಒಟ್ಟುಗೂಡಿಸುವಲ್ಲಿ ಯಶಸ್ವಿಯಾಗಿರುವ ಇವರು, ಯುವ ಪಡೆಯನ್ನು ರಾಜಕೀಯ ನೆಲೆಯಲ್ಲಿ ಸಂಘಟಿಸುವ ಹಂಬಲವನ್ನು ಹೊಂದಿರುತ್ತಾರೆ.
ಯುವ ನಾಯಕ ಸುಹೈಲ್ ಕಂದಕ್ ಅವರ ಸಾರಥ್ಯದಲ್ಲಿ ಸಮಾಜಮುಖಿ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಮೊಹಮ್ಮದ್ ಬಶೀರ್ ಕಣ್ಣೂರು ರಕ್ತದಾನ ಶಿಬಿರ, ಬಡವರಿಗೆ ಮನೆ ನಿರ್ಮಾಣ, ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಧಾರ್ಮಿಕ ಕ್ಷೇತ್ರಗಳಿಗೆ ಧನ ಸಹಾಯ ಮಾಡುವ ಮೂಲಕ ಜನರಲ್ಲಿ ಮನೆ ಮಾತಾಗಿದ್ದಾರೆ.
ಕೋವಿಡ್-19 ಮಹಾಮಾರಿಯ ವೇಳೆ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿದ ಬಶೀರ್ ಸಾವಿರಾರು ಕಾರ್ಮಿಕರಿಗೆ ಎರಡು ಹೊತ್ತಿನ ಊಟದ ಸೌಲಭ್ಯ ಸಿಗುವಂತೆ ಮಾಡಿದರು. ಅಲ್ಲದೇ ಸುಹೈಲ್ ಕಂದಕ್ ರವರ ಸಲಹೆ ಮತ್ತು ನೆರವಿನಿಂದ ವೈದ್ಯಕೀಯವಾಗಿ ಸಹಾಯ ಕೂಡ ಮಾಡಿದ್ದರು.
ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ 2024ರ ಆಗಸ್ಟ್ ತಿಂಗಳಿನಲ್ಲಿ ಮತದಾನ ನಡೆದಿತ್ತು. ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು. ಸ್ಪರ್ಧಾರ್ಥಿಗಳಲ್ಲಿ ಎರಡನೆಯ ಸ್ಥಾನಾರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.