ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ವಕೀಲರಾದ ಮೂಡಬಿದರೆ ಚೌಟರ ಅರಮನೆಯ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ.

ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ಕು ಮಂದಿ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.

ಸಮಿತಿಯ ಸದಸ್ಯರಾಗಿ ಹರೀಶ ಎ. ನಾಗುರಿ, ಕಿಶೋರ್ ಕುಂದರ್ ಎಕ್ಕೂರು, ಅಬೂಬಕ್ಕರ್ ಜಿ.ಎನ್., ಹರಿಣಿ ಬಿಕರ್ನಕಟ್ಟೆ ಅವರನ್ನು ನೇಮಕಗೊಳಿಸಲಾಗಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಸಿ. ಬಲರಾಮ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. 

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article