ಮಾದಕ ವಸ್ತು ಎಂಡಿಎಂಎ ಮಾರಾಟ: ಬಂಧನ

ಮಾದಕ ವಸ್ತು ಎಂಡಿಎಂಎ ಮಾರಾಟ: ಬಂಧನ


ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ/ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಫೆ.25ರಂದುಎಂಡಿಎಂಎ ನ್ನು ಬೆಂಗಳೂರಿನಲ್ಲಿ ಖರೀದಿಸಿಕೊಂಡು ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ನೆಹರೂ ಮೈದಾನದ  ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಂಟ್ವಾಳ ಸಜಿಪದ  ಆಸೀಫ್ ಯಾನೆ ಆಚಿ(32) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,35,000 ಮೌಲ್ಯದ 27 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,45,500 ಆಗಬಹುದು. ಈ ಬಗ್ಗೆ  ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಆರೋಪಿಯು ಎಂಡಿಎಂಎ ನ್ನು ಬೆಂಗಳೂರಿನಿಂದ  ಖರೀದಿಸಿಕೊಂಡು ಬಸ್ಸಿನಲ್ಲಿ ಮಂಗಳೂರಿಗೆ ಬಂದು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವುದಾಗಿದೆ. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈತನ ವಿರುದ್ಧ ಈ ಹಿಂದೆ 2018ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ, 2021ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ 2023 ನೇ ಇಸವಿಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ೩ ಪ್ರಕರಣ ದಾಖಲಾಗಿರುತ್ತದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article