ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ನೆರವೇರಿದ ಶತರುದ್ರಾಭಿಷೇಕ ಸೇವೆ: ಲೋಕಸಭೆ ಚುನಾವಣೆಯಲ್ಲಿ ಕ್ಯಾ. ಚೌಟ ಗೆಲುವಿನ ಹರಕೆ ತೀರಿಸಿದ ಕಾರ್ಯಕರ್ತರು

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ನೆರವೇರಿದ ಶತರುದ್ರಾಭಿಷೇಕ ಸೇವೆ: ಲೋಕಸಭೆ ಚುನಾವಣೆಯಲ್ಲಿ ಕ್ಯಾ. ಚೌಟ ಗೆಲುವಿನ ಹರಕೆ ತೀರಿಸಿದ ಕಾರ್ಯಕರ್ತರು


ಮಂಗಳೂರು: ಲೋಕ ಕಲ್ಯಾಣಾರ್ಥವಾಗಿ ಹಾಗೂ ಹರಕೆಯ ಭಾಗವಾಗಿ ಬಿಜೆಪಿಯ ಉಪ್ಪಿನಂಗಡಿ, ಕಣಿಯೂರು ಮಹಾಶಕ್ತಿ ಕೇಂದ್ರದ ಮತ್ತು ಗ್ರಾಮಸ್ಥರ ವತಿಯಿಂದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಉಪಸ್ಥಿತಿಯಲ್ಲಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ಇಂದು ಶತರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು. 

ವೇ.ಮೂರ್ತಿ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ ನೆರವೇರಿಸಲಾಗಿದೆ. 


ಗೆಲುವಿನ ಹರಕೆ ತೀರಿಸಿದ ಕಾರ್ಯಕರ್ತರು:

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕ್ಯಾ. ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಗ್ರಾಮಸ್ಥರು, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಹೇಳಿಕೊಂಡಿದ್ದರು. ಅದರಂತೆ ಇಂದು ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಹಸ್ರ ರುದ್ರಾಭಿಷೇಕವನ್ನು ಸಮರ್ಪಿಸುವ ಮೂಲಕ ಆ ಹರಕೆಯನ್ನು ತೀರಿಸಲಾಗಿದೆ. ಕ್ಯಾ. ಚೌಟ ಅವರು ಕೂಡ ಇಂದಿನ ಪೂಜಾ-ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು. 

ಊರಿನ ಸಮಸ್ತರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



ಪವಿತ್ರ ಕುಮಾರದಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗುವ ತುಳುನಾಡಿನ ಪುಣ್ಯ ಭೂಮಿ ದಕ್ಷಿಣದ ಕಾಶಿ ಎಂದೇ ಕರೆಯಲ್ಪಡುವ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ಕೇಂದ್ರ ಸರ್ಕಾರದ ‘ಪ್ರಸಾದ್’ ಯೋಜನೆಯಡಿ ಅಭಿವೃದ್ಧಿಪಡಿಸಿ ಹೆಚ್ಚಿನ ಸಂಖ್ಯೆಯ ಭಕ್ತರು-ಪ್ರವಾಸಿಗರನ್ನು ಆಕರ್ಷಿಸುವುದಕ್ಕೆ ಅನುಕೂಲ ಕಲ್ಪಿಸಬೇಕೆಂದು ಕ್ಯಾ. ಚೌಟ ಅವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ‘ಪ್ರಸಾದ್’ ಯೋಜನೆ ದೇವಸ್ಥಾನಗಳ ಪಟ್ಟಿಗೆ ತರುವ ವಿಚಾರವಾಗಿ ಇತ್ತೀಚೆಗೆ ನಡೆದ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿಯೂ ಕ್ಯಾ. ಚೌಟ ಅವರು ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article