
ದರೆಗುಡ್ಡೆಯಲ್ಲಿ 15 ಕೋ.ರೂ.ಗು ಅಧಿಕ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ: ಶಾಸಕ ಕೋಟ್ಯಾನ್
ದರೆಗುಡ್ಡೆ: ಅಂಗನವಾಡಿ ಕಟ್ಟಡ ಉದ್ಘಾಟನೆ
ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ಪಂಚಾಯತ್‌ನ ಭಾರತ್ ನಿಮಾ೯ಣ್ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕೆ ಸ್ಥಳಾಂತರಗೊಂಡು ನವೀಕೃತಗೊಂಡಿರುವ ಪಂಚಾಯತ್ ಕಚೇರಿ ಹಾಗೂ 20ಲಕ್ಷ ರೂ. ವೆಚ್ಚದಲ್ಲಿ ನಿಮಾ೯ಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 15 ಕೋಟಿಗೂ ಅಧಿಕ ಅನುದಾನವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ತನ್ನ ಶಾಸಕತ್ವದಲ್ಲಿ ಒದಗಿಸಲಾಗಿದೆ. ಪಣಪಿಲದಲ್ಲಿ ಅಕಾಲಿಕ ಮಳೆಗೆ ಕೊಚ್ಚಿ ಹೋಗಿರುವ ಸೇತುವೆ ನಿರ್ಮಾಣಕ್ಕೆ 50 ಲಕ್ಷ ರೂ., ಇಟಲ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯ ಪೂರಕವಾಗಿ ದೇವಳದ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಮಂಜೂರಾಗಿದ್ದು ಕಾಮಗಾರಿ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪೂರಕವಾಗಿ ಸ್ಪಂದಿಸಿದಾಗ ಜನಪರವಾಗಿ ಬೆಳೆಯಲು ಸಾಧ್ಯ. ತಾನು ಸೇವಾ ಕಾಯ೯ಗಳನ್ನು ಮಾಡಲು ಇಲ್ಲಿನ ಕಾಯ೯ಕತ೯ರು ಅವಕಾಶ ಮಾಡಿಕೊಟ್ಟಿದ್ದಾರೆ ತನ್ನಿಂದ ಸಾಧ್ಯವಾದಷ್ಟು ಸಹಕಾರ ಮಾಡುವುದಾಗಿ ತಿಳಿಸಿದರು.
ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಸಭಾಧ್ಯಕ್ಷತೆ ವಹಿಸಿದ್ದರು.
ಪಂಚಾಯತ್ ಉಪಾಧ್ಯಕ್ಷೆ ನಳಿನಿ, ಸದಸ್ಯರಾದ ಮುನಿರಾಜ ಹೆಗ್ಡೆ, ತುಳಸಿ ಮೂಲ್ಯ, ಸುಭಾಶ್ಚಂದ್ರ ಚೌಟ, ದೀಕ್ಷಿತ್ ಪಣಪಿಲ, ಸಂತೋಷ್ ಪೂಜಾರಿ, ಪ್ರಸಾದ್ ಕುಮಾರ್, ಶಾಲಿನಿ, ಶಶಿಕಲಾ, ಜನಿತಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಪಿ. ಜಗದೀಶ ಅಧಿಕಾರಿ, ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಕಾರ್ಯದರ್ಶಿ ಸತ್ಯಭಾಮ, ಅಂಗನವಾಡಿ ಮೇಲ್ವಿಚಾರಕಿ ಶುಭಾ, ಕಾತ್ಯಾಯಿನಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಕೆ. ಕರಿಯ, ಕರಾವಳಿ ಕೇಸರಿ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಮಿತ್‌ರಾಜ್ ದರೆಗುಡ್ಡೆ, ಸಂದೀಪ್ ಸುವರ್ಣ ಕೆಲ್ಲಪುತ್ತಿಗೆ, ದರೆಗುಡ್ಡೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಕುಮಾರ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಕುಸುಮಾ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲ ರಾವ್ ಉಪಸ್ಥಿತರಿದ್ದರು.
ಗೌರವ:
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಶಿಕ್ಷಕಿ ರಮಣಿ ಬಿ., ಶ್ರೀಮತಿ, ಸಹಾಯಕಿಯರಾದ ವೆಲಂಟೈನ್ ಡಿಕುನ್ಹ, ಲಲಿತಾ, ಪದೋನ್ನತಿಗೊಂಡ ವಲಯ ಮೇಲ್ವಿಚಾರಕಿ ಶುಭ ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿಗಳಿಗೆ ಸಹಕರಿಸುತ್ತಿರುವವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜು ಸ್ವಾಗತಿಸಿದರು. ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.