
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕ್ಯಾನ್ಸರ್ ತಪಾಸಣೆ
Tuesday, February 25, 2025
ಮೂಡುಬಿದಿರೆ: ಕೆಎಂಸಿ ಮಂಗಳೂರು ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಸ್ತ್ರೀಯರಿಗೆ ಉಚಿತ ಪ್ಯಾಪ್ ಸ್ಮಿಯರ್ ಪರೀಕ್ಷೆ ಸ್ತನ ಕ್ಯಾನ್ಸರ್ ಹಾಗೂ ಎಲ್ಲರಿಗೂ ಬಾಯಿ, ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಉಚಿತ ತಪಾಸಣಾ ಶಿಬಿರ ಮತ್ತು ಅರಿವು ಮೂಡಿಸುವ ಕಾಯ೯ಕ್ರಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಃಗವಾಗಿ ಈ ವಷ೯ ವಿಶಿಷ್ಠತೆಯಿಂದ ಏಕತೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾಯ೯ಕ್ರಮವನ್ನು ಹಮ್ಮಿಕೊಂಡು ಈ ಮೂಲಕ ಆದಷ್ಟು ಬೇಗ ಕ್ಯಾನ್ಸರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕೆಂಬ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದ್ದು ಈ ಶಿಬಿರದಲ್ಲಿ ಕ್ಯಾನ್ಸರ್ ನ ಪ್ರಾರಂಭಿಕ ಹಂತದ ಲಕ್ಷಣಗಳಿರುವ ಇಬ್ಬರನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆದುಕೊಳ್ಳಲು ತಿಳಿಸಲಾಗಿದೆ.
ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ಡಾ. ರಜತ್ ಕ್ಯಾನ್ಸರ್ ಬಗ್ಗೆ ಮಾಹಿತಿ, ಬಾಯಿಯ ಕ್ಯಾನ್ಸರ್ ಬಗ್ಗೆ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಡಾ. ಶೌಜಿಯಾ ಬ್ಯಾನಜಿ೯ ಅವರು ಗಭ೯ಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.