
ಕಾಳಿಕಾಂಬಾ ಮಹಿಳಾ ಸಮಿತಿ ವಿವಿಧ ಸ್ಪರ್ಧೆ
Monday, February 17, 2025
ಮೂಡುಬಿದಿರೆ: ಇಲ್ಲಿನ ಕಾಳಿಕಾಂಬಾ ಮಹಿಳಾ ಸಮಿತಿಯ ವತಿಯಿಂದ ಗುರುಮಠ ಕಾಳಿಕಾಂಬಾ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು ಭಾನುವಾರ ಕ್ಷೇತ್ರದಲ್ಲಿ ನಡೆಯಿತು.
ಸ್ಪರ್ಧೆಯನ್ನು ಉದ್ಘಾಟಿಸಿದ ಕ್ಷೇತ್ರದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಮಾತನಾಡಿ ಸಮಿತಿಯು ಹಲವು ವರ್ಷಗಳಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಿದೆ. ಇಂತಹ ಸ್ಪರ್ಧೆಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರಣೆಯಾಗಿದೆ ಎಂದರು. ಕ್ಷೇತ್ರದ ಮೊಕ್ತೇಸರ ಯೋಗೀಶ ಆಚಾರ್ಯ ಶುಭ ಹಾರೈಸಿದರು. ಕಾಳಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ಶ್ರೀನಾಥ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ ಸ್ವಾಗತಿಸಿದರು. ಶ್ರೀಮತಿ ವಂದಿಸಿದರು. ಕಸ್ತೂರಿ ದೇವರಾಜ್ ಕಾರ್ಯಕ್ರಮ ನಿರ್ವಹಿಸಿದರು. ಮಹಿಳೆಯರಿಗೆ ಮತ್ತು ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು, ಆವೆಮಣ್ಣಿನ ಕಲಾಕೃತಿ, ಚಿತ್ರಕಲೆ, ರಸಪ್ರಶ್ನೆ ನಡೆಯಿತು.