ಮೂಡುಬಿದಿರೆ ತಾಲೂಕಿನ ಕಡಂದಲೆ ಸುಬ್ರಹ್ಮಣ್ಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಹಕ ಶಿಕ್ಷಣ

ಮೂಡುಬಿದಿರೆ ತಾಲೂಕಿನ ಕಡಂದಲೆ ಸುಬ್ರಹ್ಮಣ್ಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಹಕ ಶಿಕ್ಷಣ


ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಡ ಶಾಲೆ ಕಡಂದಲೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಹಕ ವಿಷಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಬೆಂಗಳೂರು ಕ್ರಿಯೇಟ್ ಗ್ರಾಹಕ ಸಂಸ್ಥೆಯ ಸದಸ್ಯ, ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ತಿಳಿಸಿದರು.

ಫೆ.6 ರಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರೌಢಶಾಲಾ ಹತ್ತನೇ ತರಗತಿ ಪಾಠದಲ್ಲಿ ಬರುವ ಗ್ರಾಹಕ ಹಕ್ಕು ಮತ್ತು ಕರ್ತವ್ಯಗಳು ಬದುಕಿನಲ್ಲಿ ಎಷ್ಟು ಪ್ರಾಮುಖ್ಯ ಎಂದು ಹಲವಾರು ಉದಾಹರಣೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು. ಯಾವುದೇ ವಸ್ತುವನ್ನು ಕಳೆದುಕೊಂಡಾಗ ದಾಖಲೆಗಳ ಮೌಲ್ಯ ತಿಳಿಯುತ್ತದೆ. ಆದುದರಿಂದ ಎಲ್ಲರೂ ದಾಖಲೆಗಳನ್ನು ಸಮರ್ಪಕವಾಗಿ ಇರಿಸಿಕೊಂಡು ಲಾಭ ಪಡೆಯಲು ತಿಳಿಸಿದರು. 

ಗ್ರಾಹಕ ಹಕ್ಕು, ಮಾಹಿತಿ ಹಕ್ಕು ಕಾಯ್ದೆಯ ಸದುಪಯೋಗವನ್ನು ಹೇಗೆ ಪಡೆಯಬಹುದಾಗಿದೆ ಎಂದು ವಿವರವಾಗಿ ತಿಳಿಸಿದರು. 

ವಿದ್ಯಾಸಂಸ್ಥೆಯ ಎಲ್ಲಾ ಅಧ್ಯಾಪಕರು, ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. 

ಈ ಸಂದರ್ಭದಲ್ಲಿ ಸ್ಥಳೀಯ ಪತ್ರಕರ್ತರಾದ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ದಿನಕರ ಕುಂಭಾಶಿ ಸ್ವಾಗತಿಸಿದರು. ಶಿಕ್ಷಕ ಸದಾಶಿವ ಉಪಾಧ್ಯಾಯ ಕಾರ್ಯಕ್ರಮ ಸಂಯೋಜಿಸಿದ್ದರು. ಶಿಕ್ಷಕ ಸುಧಾಕರ ಪೊಸ್ರಾಲ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article