
ಮುಕ್ತ ವಿವಿ ವಿಜ್ಞಾನ ವಿಷಯದ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಆಳ್ವಾಸ್ ಆಯ್ಕೆ
Monday, February 17, 2025
ಮೂಡುಬಿದಿರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿ ಪಡೆದಿರುವ ಸ್ನಾತಕ ಮತ್ತು ಸ್ನಾತಕೋತ್ತರ ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳಿಗೆ ಆಳ್ವಾಸ್ ಪದವಿ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವರ್ತಿತ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ದಲ್ಲಿ ಈ ಶೈಕ್ಷಣಿಕ ಸಾಲಿನಿಂದ ಪ್ರವೇಶಾತಿ ಪಡೆಯುವ ಅಭ್ಯರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಕಲಬುರಗಿ, ದಾವಣಗೆರೆ, ಬೆಂಗಳೂರು ಹಾಗೂ ಮೈಸೂರು ಜಿಲ್ಲೆಯನ್ನು ಹೊರತು ಪಡಿಸಿದರೆ, ಕರಾವಳಿ ಕರ್ನಾಟಕದಲ್ಲಿ ಆಳ್ವಾಸ್ ಕಾಲೇಜು ಮಾತ್ರ ವಿಜ್ಞಾನ ವಿಷಯದ ಪ್ರಾಯೋಗಿಕ ತರಗತಿ ನಡೆಸಲು ಅವಕಾಶ ಪಡೆದಿರುವ ಕೇಂದ್ರವಾಗಿದೆ.