
ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ
Tuesday, February 11, 2025
ಮೂಡುಬಿದಿರೆ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳು, ಸೇವಾ ಸೌಲಭ್ಯಗಳನ್ನು ಒದಗಿಸಲು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಕೆಗಾಗಿ ಮೂಡುಬಿದಿರೆಯಲ್ಲಿ ಸೋಮವಾರದಿಂದ ಮುಷ್ಕರ ಆರಂಭಗೊಂಡಿದೆ.
ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು, ಅಂತರ್‌ಜಿಲ್ಲಾ ವರ್ಗಾವಣೆ ಹಾಗೂ ಇತರ ಎಲ್ಲ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲೂ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರೂಪಿಸಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿ ಸೌಲಭ್ಯಗಳನ್ನು ಕಲ್ಪಿಸಬೇಕು, ಸುಸಜ್ಜಿತ ಕಚೇರಿ ಸಹಿತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು, ಮಹಿಳಾ ಗ್ರಾಮ ಆಡಳಿತಾಧಿಕಾರಿಗಳಿಗೆ ಸುರಕ್ಷಾ ಸೌಲಭ್ಯಗಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಯುತ್ತಿದೆ.
ಮುಷ್ಕರದಲ್ಲಿ ಗ್ರಾಮ ಆಡಳಿತಾಧಿಕಾರಿಗಳಾದ ಕಿಶೋರ್ ಕುಮಾರ್, ಐಕ್ಯ, ಸ್ವಾತಿ, ಮಹೇಶ್, ಅನಿಲ್ ಕುಮಾರ್, ಶ್ರೀನಿವಾಸ್, ಶಾದಿಯಾ ಬಾನು ಭಾಗವಹಿಸಿದ್ದಾರೆ.
ಮುಷ್ಕರವು ರಾಜ್ಯದಾದ್ಯಂತ ಸೋಮವಾರದಿಂದ ಆರಂಭಗೊಂಡಿದೆ.