
ಪಡು ಮಾರ್ನಾಡು ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು, ನಿರ್ದೇಶಕರಿಗೆ ಅಭಿನಂದನೆ
ಮೂಡುಬಿದಿರೆ: ಪಡುಮಾರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ದಯಾನಂದ ಪೈ ಹಾಗೂ ನಿರ್ದೇಶಕರಿಗೆ ಅಭಿನಂದನಾ ಸಮಿತಿಯ ವತಿಯಿಂದ ಅಭಿನಂದನಾ ಕರ‍್ಯಕ್ರಮವು ಭಾನುವಾರ ಸಹಕಾರಿ ಸಂಘದಲ್ಲಿ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷ ದಯಾನಂದ ಪೈ ಹಾಗೂ ನಿರ್ದೇಶಕರನ್ನು ಅಭಿನಂದಿಸಿದರು. ಬಳಿಕ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟವು ರಾಜ್ಯದಲ್ಲೇ ಮಾದರಿಯಾಗಿದ್ದು ಸ್ಥಳೀಯವಾಗಿ ಕರ‍್ಯ ನಿರ್ವಹಿಸುವ ಸಹಕಾರಿ ಸಂಘಗಳು ಒಕ್ಕೂಟದ ಬೆನ್ನೆಲುಬಾಗಿವೆ. ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಎಂದರು.
ಮುಖ್ಯ ಅತಿಥಿಗಳಾಗಿ ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಮಾತನಾಡಿ ರೈತರು ಹೈನುಗಾರಿಕೆಯಲ್ಲಿ ಲಾಭಗಳಿಸಲು ಹೆಚ್ಚು ಹಾಲು ಕೊಡುವ ಹಸುಗಳನ್ನು ಖರೀದಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಬನ್ನಡ್ಕ ಕ್ಷೇತ್ರದ ಆಡಳಿತ ಮೋಕ್ತೇಸರ ಸುಕುಮಾರ್ ಬಳ್ಳಾಲ್, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ನರಸಿಂಹ ಕಾಮತ್, ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಪ್ರೆಸ್ ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ಕೆ.ಎಂ.ಎಫ್ ವಿಸ್ತರಣಾಧಿಕಾರಿ ಸೌಂದರ್ಯ, ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷೆ ಉಷಾ ಡಿ. ಪೈ ಭಾಗವಹಿಸಿ ಶುಭ ಕೋರಿದರು.
ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿರ್ದೇಶಕರಾದ ರಮೇಶ್ ಪಿ ಶೆಟ್ಟಿ, ಜಯಂತ್ ಪೂಜಾರಿ, ನಮಿರಾಜ್ ಪಿ ಬಲ್ಲಾಳ್, ಪಾರ್ಶ್ವನಾಥ ಜೈನ್, ಪ್ರಮೀಣ್ ಕುಮಾರ್, ಲಲಿತಾ ಮೂಲ್ಯ, ಜಯಂತಿ, ಗೀತಾ ಆರ್ ಪೂಜರ‍್ತಿ, ಕರ್ಗಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕುಣಿತ ಭಜನಾ ತಂಡದ ಸದಸ್ಯರನ್ನು ಗೌರವಿಸಲಾಯಿತು. ಶಿಕ್ಷಕಿ ರಾಜಶ್ರೀ ನಾಯಕ್ ಸ್ವಾಗತಿಸಿದರು. ಅಭಿನಂದನಾ ಸಮಿತಿಯ ಅಧ್ಯಕ್ಷ ವಿಶ್ವನಾಥ್ ಕಾಮತ್ ವಂದಿಸಿದರು. ಶಿಕ್ಷಕ ಪ್ರಸನ್ನ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.