
ಮೈಟ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ
Friday, February 7, 2025
ಮೂಡುಬಿದಿರೆ: ತೋಡಾರಿನಲ್ಲಿರುವ ಮೈಟ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಶುಕ್ರವಾರ ಪಿ.ಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಬಂಟ್ವಾಳ ಅಳಿಕೆ ಗ್ರಾಮದ ಭಾಸ್ಕರ್ ಅವರ ಪುತ್ರ ಮಿಥುನ್ (22)ಎಂದು ತಿಳಿದು ಬಂದಿದೆ. ಶುಕ್ರವಾರ ಕಾಲೇಜಿನಲ್ಲಿ ಪರೀಕ್ಷೆ ಇತ್ತೆನ್ನಲಾಗಿದೆ. ಪಿಜಿಯಲ್ಲಿದ್ದ ಇತರ ಇಬ್ಬರು ವಿದ್ಯಾರ್ಥಿಗಳು ಹೊರಗಡೆ ಹೋದ ಸಂದರ್ಭ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.