
ಬಿಜೆಪಿಯಿಂದ ‘ಸಮಪ೯ಣಾ ದಿನ’ ಆಚರಣೆ
Tuesday, February 11, 2025
ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ ‘ಸಮರ್ಪಣಾ ದಿನವನ್ನು’ ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹಿರಿಯರಾದ ಕೆ.ಆರ್. ಪಂಡಿತ್, ಮೂಡದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ. ಎ.ಪಿ.ಎಮ್.ಸಿ ಸದಸ್ಯರಾದ ಕೃಷ್ಣರಾಜ ಹೆಗ್ಡೆ, ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು, ಮತ್ತು ಪುರಸಭಾ ಸದಸ್ಯರು ಹಾಗೂ ಪಕ್ಷದ ಅನನ್ಯ ಜವಾಬ್ಧಾರಿಯುತ ಪ್ರಮುಖರು ಭಾಗವಹಿಸಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪಾಚ೯ನೆಗೈದರು.