ಶ್ರೀ ನಡ್ಯೋಡಿ ದೈವಸ್ಥಾನದ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಮೆರವಣಿಗೆ

ಶ್ರೀ ನಡ್ಯೋಡಿ ದೈವಸ್ಥಾನದ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಮೆರವಣಿಗೆ


ಮೂಡುಬಿದಿರೆ: ಇಂದಿನಿಂದ ಮಾರ್ಚ್ 3ರವರೆಗೆ ನಡೆಯಲಿರುವ  ನಡ್ಯೋಡಿ ದೈವಸ್ಥಾನದ ನಾಲ್ಕನೇ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ನೇಮೋತ್ಸವಕ್ಕೆ ಮುಂಚಿತವಾಗಿ ಮಂಗಳವಾರ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಿಂದ ನಡ್ಯೋಡಿ ದೈವಸ್ಥಾನದವರೆಗೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.  

ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆಯನ್ನು ನೀಡಿದರು. 


ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮಾಯಂದಲೆ ಸಿರಿ ದೈವಗಳ ಮೂರ್ತಿಯನ್ನು ಮೆರವಣಿಗೆಯಲ್ಲಿ ತರಲಾಯಿತು.

ಚೌಟರ ಅರಮನೆಯ ಕುಲದೀಪ್ ಎಂ., ಪುರಸಭಾ ಸದಸ್ಯರಾದ ಸುಜಾತ ಶಶಿಕಿರಣ್, ಮಮತಾ ಆನಂದ್, ಸುರೇಶ್ ಪ್ರಭು, ಬ್ರಹ್ಮಕಲಶೋತ್ಸವ ಬ್ರಹ್ಮಕಲಶೋತ್ಸವ ಸಮಿತಿ, ಅಧ್ಯಕ್ಷರಾದ ದಿಲೀಪ್ ಕುಮಾರ್ ಶೆಟ್ಟಿ,ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ಎಂ.ಪುರುಷೋತ್ತಮ ಶೆಟ್ಟಿ ನಡ್ಯೋಡಿ ದೈವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್ ರೈ, ಕಾರ್ಯದರ್ಶಿಗಳಾದ ಯತೀಶ್ ಕೋಟ್ಯಾನ್, ಪ್ರಸನ್ನ ಹೆಗ್ಡೆ ಮತ್ತಿತರರು ಈ ಸಂದಭ೯ದಲ್ಲಿದ್ದರು.


ಮಾರೂರು ಖಂಡಿಗ ಶ್ರೀರಾಮದಾಸ್ ಅಸ್ರಣ್ಣ ಅವರು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊ ಇವರಿಂದ ನೃತ್ಯ ವೈವಿಧ್ಯ ಬಳಿಕ ಕಲ್ಲಡ್ಕ ವಿಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಪ್ರಸ್ತುತಗೊಂಡಿತು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article